ಕರ್ತೃ – ಶ್ರೀ ಷ.ಬ್ರ. ಸಿದ್ದರಾಮ ಶಿವಾಚಾರ್ಯ ಮಹಾಸ್ವಾಮಿಗಳು
ಹಿಪ್ಪರಗಿ ಗ್ರಾಮದಲ್ಲಿ ಶ್ರೀ ಸಿದ್ಧರಾಮ ಶಿವಾಚಾರ್ಯ ಸ್ವಾಮಿಗಳಿಂದ ಸ್ಥಾಪಿತ ಗೊಂಡಿರುವ ಪುರಾತನ ಕಾಲದ ಶ್ರೀ ಹಿರೇಮಠವು ಅಸ್ತಿತ್ವದಲ್ಲಿದ್ದು ತಮ್ಮ ಧಾರ್ಮಿಕ ಆಚರಣೆಗಳ ಮೂಲಕ ಈ ಭಾಗದಲ್ಲಿ ಹೆಸರುವಾಸಿಯಾಗಿದೆ ಶ್ರೀ ಮಠವು ಶ್ರೀಶೈಲ ಪೀಠದ ಶಾಖಾಮಠವಾಗಿದ್ದು ಪುತ್ರವರ್ಗದ ಪರಂಪರೆಯಲ್ಲಿ ಬೆಳೆದು ಬಂದಿದೆ. ಶ್ರೀ ಸಿದ್ಧರಾಮ ಶಿವಾಚಾರ್ಯರು ಲೋಕಸಂಚಾರಿಗಳಾಗಿದ್ದು ಪುಣ್ಯಕ್ಷೇತ್ರಗಳನ್ನು ಸಂದರ್ಶಿಸುತ್ತಾ ಹಿಪ್ಪರಗಿಗೆ ಬಂದು ಇಲ್ಲಿ ನೆಲೆಸಿ ಶ್ರೀಮಠವನ್ನು ಸ್ಥಾಪನೆ ಮಾಡಿದ್ದಾರೆ ಎಂದು ತಿಳಿದುಬರುತ್ತದೆ. ಶ್ರೀಗಳು ತಮ್ಮ ಧಾರ್ಮಿಕ ಆಚರಣೆಗಳಿಂದಾಗಿ ಈ ಕ್ಷೇತ್ರವನ್ನು ಸುಕ್ಷೇತ್ರವನ್ನಾಗಿ ಮಾಡಿದ್ದಾರೆ. ಕರ್ತೃಗುರುಗಳ ನಂತರದ ಪರಂಪರೆಯ ಬಗ್ಗೆ ಹೆಚ್ಚು ನಿಖರವಾದ ಮಾಹಿತಿಗಳು ಸಿಗುವುದಿಲ್ಲ. ಪರಂಪರೆಯಲ್ಲಿ ಬಂದಿರಬಹುದಾದ ಶ್ರೀಗಳು ತಮ್ಮ ಕಾಲಾವಧಿಗಳಲ್ಲಿ ಶ್ರೀಮಠವನ್ನು ತಮ್ಮ ಧಾರ್ಮಿಕ ಆಚರಣೆಗಳ ಮೂಲಕ ಶ್ರೀಮಠವನ್ನು ಮುನ್ನಡೆಸಿ ಭಕ್ತರ ಶ್ರದ್ಧಾಭಕ್ತಿಯ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಹಿಂದಿನ ಶ್ರೀಗಳಾದ ಶ್ರೀ ಚಂದ್ರಕಾಂತ ಶಿವಾಚಾರ್ಯ ಸ್ವಾಮಿಗಳು ಅಧಿಕಾರಕ್ಕೆ ಬಂದು ಮಠದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಶ್ರೀಗಳು ಶಿವಪೂಜಾನಿಷ್ಠರಾಗಿದ್ದು, ತಮ್ಮ ಧಾರ್ಮಿಕ ಚಟುವಟಿಕೆಗಳ ಮೂಲಕ ಭಕ್ತಜನರ ಪ್ರೀತಿಗೆ ಪಾತ್ರರಾಗಿದ್ದರು. ಶ್ರೀಗಳು ಶ್ರೀಮಠವನ್ನು ಸರ್ವಾಂಗೀಣವಾಗಿ ಮುನ್ನಡೆಸುತ್ತಾ 1971ರಲ್ಲಿ ಲಿಂಗೈಕ್ಯರಾಗಿದ್ದಾರೆ. ಈಗಿನ ಶ್ರೀಗಳಾದ ಶ್ರೀ ಷ.ಬ್ರ. ಡಾ. ಸಿದ್ಧರಾಮ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಗಳು ಶ್ರೀಮಠದ ಪಟ್ಟಾಧಿಕಾರವನ್ನು ಸ್ವೀಕರಿಸಿ ಶ್ರೀಮಠವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ. ಶ್ರೀಗಳು ಶಿವಯೋಗ ಮಂದಿರ ಹಾಗೂ ಕಾಶಿಯಲ್ಲಿ ವಿದ್ಯಾಭ್ಯಾಸ ಮಾಡಿ, ಸ್ನಾತಕೋತ್ತರ ಪದವಿಯನ್ನು ಸಂಸ್ಕøತದಲ್ಲಿ ರಾಷ್ಟ್ರಪತಿಗಳ ಚಿನ್ನದ ಪದಕದೊಂದಿಗೆ ಪಡೆದವರು. ತದನಂತರ “ಶ್ರೀಮನ್ ಭಗವದ್ಗೀತೆ ಮತ್ತು ಸಿದ್ದಾಂತ ಶಿಖಾಮಣಿ ಒಂದು ತೌಲನಿಕ ಸಮೀಕ್ಷೆ” ಎಂಬ ಪ್ರಬಂಧದ ಮೇಲೆ ಗೌರವ ಡಾಕ್ಟರೇಟ್ ಪಡೆದ ಮಹಾಜ್ಞಾನಿಗಳಾಗಿದ್ದಾರೆ. ಪ್ರಸ್ತುತ ಶ್ರೀಗಳು ಶ್ರೀಶೈಲ ಪೀಠದ ಜಗದ್ಗುರುಗಳಾಗಿ ಅಧಿಕಾರ ವಹಿಸಿಕೊಂಡಿದ್ದು ಅಲ್ಲಿಂದಲೇ ಶ್ರೀಮಠವನ್ನು ಮುನ್ನಡೆಸುತ್ತಿದ್ದಾರೆ.
Swamiji
Swamiji Name :
ಶ್ರೀ ಷ.ಬ್ರ. ಡಾ. ಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಗಳು
Date of Birth :
28-7-1971
Place :
ಹಿಪ್ಪರಗಿ, ಜಮಖಂಡಿ ತಾ||
Photo :
Programs
ಯುಗಾದಿ ನಂತರ ಬರುವ ಷಷ್ಠಿ ತಿಥಿಗೆ ಲಿಂ. ಶ್ರೀ ಷ.ಬ್ರ. ಸಿದ್ದರಾಮ ಶಿವಾಚಾರ್ಯ ಸ್ವಾಮಿಗಳ ಪುಣ್ಯಾರಾಧನೆ.
ಶ್ರಾವಣ ಮಾಸದಲ್ಲಿ ಒಂದು ತಿಂಗಳು ಪುರಾಣ ಪ್ರವಚನ ಹಾಗೂ ವಿಶೇಷ ಪೂಜೆ.
Institutions
ಕಿರಿಯ / ಹಿರಿಯ ಪ್ರಾಥಮಿಕ ಶಾಲೆ.
Photos
Full Address Kannada
ಶ್ರೀ ಹಿರೇಮಠ
ಹಿಪ್ಪರಗಿ - 587 311
ಜಮಖಂಡಿ ತಾ||, ಬಾಗಲಕೋಟೆ ಜಿ||