ಕರ್ತೃ – ಶ್ರೀ ಷ.ಬ್ರ. ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮಿಗಳು
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಶಾನವಾಸಪುರ ಗ್ರಾಮವು ತಾಲ್ಲೂಕುಕೇಂದ್ರದಿಂದ 25 ಕಿ.ಮೀ. ದೂರದಲ್ಲಿದ್ದು ಈ ಗ್ರಾಮದಲ್ಲಿ ಶ್ರೀಮದ್ ಉಜ್ಜಯಿನಿ ಪೀಠದಶಾಖಾಮಠವಾಗಿರುವ ಶ್ರೀ ದಾರುಕ ಮಠವು ಅಸ್ತಿತ್ವದಲ್ಲಿದ್ದು ತನ್ನ ಧಾರ್ಮಿಕ ಹಾಗೂಸಾಮಾಜಿಕ ಚಟುವಟಿಕೆಗಳಿಂದ ಈ ಭಾಗದಲ್ಲಿ ಪ್ರಮುಖ ಧಾರ್ಮಿಕ ಕೇಂದ್ರವಾಗಿಕಂಗೊಳಿಸುತ್ತಿದೆ.ಶ್ರೀ ಷ.ಬ್ರ. ಪ್ರಸನ್ನ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು ಶ್ರೀ ದಾರುಕಮಠವನ್ನು 1996ರಲ್ಲಿ ಸ್ಥಾಪಿಸಿದ್ದು ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.ಶ್ರೀಗಳು ಮುಂಡರಗಿ ತಾಲ್ಲೂಕು ಚಿಕ್ಕವಡ್ಡಟ್ಟಿಯವರಾಗಿದ್ದು ಚಿಕ್ಕವಯಸ್ಸಿನಲ್ಲಿಯೇಧಾರ್ಮಿಕತೆಯ ಬಗ್ಗೆ ಒಲವು ಹೊಂದಿದ್ದು ಶಿವಪೂಜಾನಿಷ್ಠರಾಗಿದ್ದರು.ಶ್ರೀಗಳು ಶ್ರೀಮಠವನ್ನು ಸ್ಥಾಪಿಸಿಕೊಂಡು ಭಕ್ತರ ಸಹಕಾರದೊಂದಿಗೆ ಶ್ರೀಮಠಕ್ಕೆಕಟ್ಟಡ ನಿರ್ಮಿಸಿ ಧಾರ್ಮಿಕ ಆಚರಣೆಗಳನ್ನು ನಡೆಸುತ್ತಾ ಬಂದಿದ್ದಾರೆ. ಹಾಗೆಯೇ ಗ್ರಾಮದಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಭಕ್ತರಿಗೆ ಸೂಕ್ತ ಮಾರ್ಗದರ್ಶನ ನೀಡಿಅವರನ್ನು ಸನ್ಮಾರ್ಗದತ್ತ ಮುನ್ನಡೆಯುವಂತೆ ಮಾಡಿದ್ದಾರೆ.ಶ್ರೀಗಳು ಶ್ರೀಮಠದಲ್ಲಿ ಪ್ರತಿನಿತ್ಯ ಧಾರ್ಮಿಕ ಆಚರಣೆಗಳೊಂದಿಗೆ ಶಿವರಾತ್ರಿಯಲ್ಲಿಜಾಗರಣೆ ಮತ್ತು ವಿಶೇಷ ಪೂಜೆ ನಡೆಸುತ್ತಾರೆ ಹಾಗೂ ಶ್ರಾವಣ ಮಾಸದಲ್ಲಿ ನಿತ್ಯರುದ್ರಾಭಿಷೇಕ, ಕಾರ್ತೀಕ ಮಾಸದಲ್ಲಿ ದೀಪೋತ್ಸವ ಕಾರ್ಯಗಳನ್ನು ಮುನ್ನಡೆಸಿಕೊಂಡುಬರುತ್ತಿದ್ದಾರೆ.
Swamiji
Swamiji Name :
ಶ್ರೀ ಷ.ಬ್ರ. ಪ್ರಸನ್ನ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳು
Date of Birth :
1-6-1951
Place :
ಚಿಕ್ಕವಡ್ಡಟ್ಟಿ, ಮುಂಡರಗಿ ತಾ||
Pattadikara :
3-5-1979
Photo :
Programs
ಶಿವರಾತ್ರಿಯಂದು ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ.
ಶ್ರಾವಣ ಮಾಸದಲ್ಲಿ ನಿತ್ಯ ರುದ್ರಾಭಿಷೇಕ. ಕಾರ್ತೀಕ ಮಾಸದಲ್ಲಿ ದೀಪೋತ್ಸವ.