ಗದಗ ಜಿಲ್ಲೆ ರೋಣ ತಾಲ್ಲೂಕಿನ ಜೇಗೇರಿ ಗ್ರಾಮವು ತಾಲ್ಲೂಕು ಕೇಂದ್ರದಿಂದ 34ಕಿ.ಮೀ. ದೂರದಲ್ಲಿದ್ದು ಈ ಗ್ರಾಮದ ಹೊರಭಾಗದಲ್ಲಿ ಪೂಜ್ಯ ಶ್ರೀ ವೀರಭದ್ರಮಹಾಸ್ವಾಮಿಗಳಿಂದ ಸ್ಥಾಪಿತಗೊಂಡಿರುವ ಶ್ರೀ ರಂಭಾಪುರಿ ಪೀಠದ ಶಾಖಾಮಠವಾಗಿಬೆಳೆದುಬಂದಿರುವ ಶ್ರೀ ಹಿರೇಮಠವು ಅಸ್ತಿತ್ವದಲ್ಲಿದ್ದು ತನ್ನ ಧಾರ್ಮಿಕ ಆಚರಣೆಗಳ ಮೂಲಕಈ ಗ್ರಾಮದಲ್ಲಿ ಧಾರ್ಮಿಕ ವಾತಾವರಣವು ನೆಲೆಗೊಳ್ಳುವಂತೆ ಮಾಡಿದೆ.ಕರ್ತೃ ಗುರುಗಳಾದ ಶ್ರೀ ವೀರಭದ್ರ ಮಹಾಸ್ವಾಮಿಗಳು ಗ್ರಾಮದಲ್ಲಿ ಶ್ರೀಮಠವನ್ನುಭಕ್ತರ ಸಹಕಾರದೊಂದಿಗೆ ಸ್ಥಾಪಿಸಿ ಸೂಕ್ತ ಮಾರ್ಗದರ್ಶನ ಮಾಡಿದ್ದಾರೆ. ಶ್ರೀಗಳುಧರ್ಮನಿಷ್ಟರಾಗಿದ್ದು ತಮ್ಮ ಧಾರ್ಮಿಕ ಆಚರಣೆಗಳ ಮೂಲಕ ಭಕ್ತರಿಗೆ ಧಾರ್ಮಿಕ ಸಂಸ್ಕಾರನೀಡಿ ಸನ್ಮಾರ್ಗದತ್ತ ಕೊಂಡೊಯ್ದಿದ್ದರು ಎಂದು ತಿಳಿದುಬರುತ್ತದೆ.ಶ್ರೀ ವೀರಭದ್ರ ಮಹಾಸ್ವಾಮಿಗಳ ನಂತರ ಶ್ರೀಮಠದ ಅಧಿಕಾರ ವಹಿಸಿಕೊಂಡ ಶ್ರೀಷ.ಬ್ರ. ಗುರುಸಿದ್ದ ಮಹಾಸ್ವಾಮಿಗಳು ಗುರುಗಳ ಹಾದಿಯಲ್ಲಿಯೇ ಶ್ರೀಮಠವನ್ನು ಧಾರ್ಮಿಕಕಾರ್ಯಕ್ರಮಗಳೊಂದಿಗೆ ಸಮರ್ಥವಾಗಿ ಮುನ್ನಡೆಸಿದ್ದು, ಶ್ರೀಗಳ ಕಾಲದಲ್ಲಿ ಶ್ರೀಮಠವುಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿದೆ. ಶ್ರೀಗಳು ತಮ್ಮ ಕಾರ್ಯಚಟುವಟಿಕೆಗಳಮೂಲಕ ಸಮಾಜದ ಅಭ್ಯುದಯಕ್ಕೆ ದುಡಿದಿದ್ದು ಶ್ರೀಮಠದ ಕಾರ್ಯವ್ಯಾಪ್ತಿಯನ್ನುವಿಸ್ತರಿಸಿದ್ದಾರೆ.ಈಗಿನ ಶ್ರೀಗಳಾದ ಶ್ರೀ. ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು1999ರ ಏಪ್ರಿಲ್ 25ರಲ್ಲಿ ಶ್ರೀಮಠದ ಪಟ್ಟಕ್ಕೆ ಬಂದಿದ್ದು ಶ್ರೀಮಠದಲ್ಲಿ ಧಾರ್ಮಿಕಆಚರಣೆಗಳನ್ನು ಚುರುಕುಗೊಳಿಸಿದ್ದಾರೆ. ಶ್ರೀಗಳು ಕ್ರಿಯಾಶೀಲರಾಗಿದ್ದು ಭಕ್ತರ ಮನೆಯಕಾರ್ಯಕ್ರಮಗಳಿಗೆ ತೆರಳಿ ಆಶಿರ್ವದಿಸಿ ಭಕ್ತರನ್ನು ಶ್ರೀ ಮಠದ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಶ್ರೀಮಠದಲ್ಲಿ ದಿನನಿತ್ಯ ಧಾರ್ಮಿಕಆಚರಣೆಗಳೊಂದಿಗೆ ಶ್ರಾವಣ ಮಾಸದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ಕಾರ್ತಿಕ ಮಾಸದಲ್ಲಿ ಲಿಂ|| ಶ್ರೀ ಷ.ಬ್ರ. ಗುರುಸಿದ್ದಮಹಾಸ್ವಾಮಿಗಳ ಪುಣ್ಯಾರಾಧನೆ ಮಹೋತ್ಸವ ನಡೆಯುತ್ತದೆ.
Swamiji
Swamiji Name :
ಶ್ರೀ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು
Place :
ನಾಯಕನೂರು, ನವಲಗುಂದ ತಾ||
Pattadikara :
25-04-1999
Photo :
Programs
ಪ್ರತಿ ಅಮಾವಾಸ್ಯೆ, ಹುಣ್ಣಿಮೆಗಳಿಗೆ ವಿಶೇಷ ಪೂಜೆ
ಕಾರ್ತೀಕ ಮಾಸದಲ್ಲಿ ಲಿಂ.ಶ್ರೀ ಗುರುಸಿದ್ದ ಮಹಾಸ್ವಾಮಿಗಳ ಪುಣ್ಯಾರಾಧನೆ
ಶ್ರಾವಣ ಮಾಸದಲ್ಲಿ ನಿತ್ಯ ವಿಶೇಷ ಪೂಜೆ, ಭಜನೆ
Photos
Full Address Kannada
ಶ್ರೀ ಹಿರೇಮಠ ಜೇಗೇರಿ,
ಕುಂಟೋಜಿ ಪೋ.
ರೋಣ ತಾ||, ಗದಗ ಜಿಲ್ಲೆ