ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ಹೊನಗುಂಟಾ ಗ್ರಾಮವು ತಾಲ್ಲೂಕುಕೇಂದ್ರದಿಂದ 25 ಕಿ.ಮೀ. ದೂರದಲ್ಲಿದ್ದು ಈ ಗ್ರಾಮದಲ್ಲಿ ಪುರಾತನ ಕಾಲದ ಶ್ರೀಸಿದ್ದಲಿಂಗೇಶ್ವರ ಸಂಸ್ಥಾನ ಮಠವು ಸ್ಥಾಪಿತಗೊಂಡು ಈ ಗ್ರಾಮದಲ್ಲಿ ಧಾರ್ಮಿಕವಾತಾವರಣವನ್ನು ನೆಲೆಗೊಳಿಸುವಲ್ಲಿ ಶ್ರಮಿಸುತ್ತಿದೆ. ಶ್ರೀಮಠವು ಪುರಾತನ ಕಾಲದ್ದಾದರೂಮಠದ ಸ್ಥಾಪಕರು ಹಾಗೂ ಸ್ಥಾಪಿತ ಕಾಲ ಮಾನದ ಬಗ್ಗೆ ಸ್ಪಷ್ಟವಾಗಿ ತಿಳಿದುಬರುವುದಿಲ್ಲ.ಶ್ರೀಮಠದ ಇತ್ತೀಚಿನ ಪರಂಪರೆಯನ್ನು ಗಮನಿಸಿದಾಗ ಎಲ್ಲಾ ಗುರುಗಳು ಶ್ರೀಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳೆಂಬ ಅಭಿದಾನ ಪಡೆದು ಅಧಿಕಾರಕ್ಕೆ ಬಂದಿದ್ದಾರೆ.ಹಾಗೂ ಶ್ರೀಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವಾಲಯವಿದ್ದು ಶ್ರೀ ಮಠದ ಗುರುಗಳೇದೇವಾಲಯದ ಧಾರ್ಮಿಕ ಆಚರಣೆಗಳನ್ನು ನಡೆಸಿಕೊಂಡು ಬಂದಿದ್ದಾರೆ. ಹೀಗಾಗಿಶ್ರೀಮಠದ ಹಿಂದಿನ ಶ್ರೀಗಳ ಗುರುಗಳಾಗಿದ್ದ ಶ್ರೀ.ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳನ್ನೇಶ್ರೀಮಠದ ಕರ್ತೃಗುರುಗಳನ್ನಾಗಿ ಹಾಗೂ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯನ್ನೇ ಶ್ರೀಮಠದಆರಾಧ್ಯದೈವವನ್ನಾಗಿ ಪೂಜಿಸಿಕೊಂಡು ಬರಲಾಗುತ್ತಿದೆ.ಹಿಂದಿನ ಶ್ರೀಗಳಾದ ಶ್ರೀ. ಮ.ನಿ.ಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಶ್ರೀಮಠವನ್ನುಸಮರ್ಥವಾಗಿ ಮುನ್ನಡೆಸಿದ್ದು ಇವರ ನಂತರ ಈಗಿನ ಶ್ರೀಗಳಾದ ಶ್ರೀ. ಮ.ನಿ.ಪ್ರ. ಸಿದ್ದಲಿಂಗಸ್ವಾಮಿಗಳು ಕಳೆದ 40 ವರ್ಷಗಳಿಂದ ಶ್ರೀಮಠದ ಕಾರ್ಯಕ್ರಮಗಳನ್ನು ಮುನ್ನಡೆಸಿಕೊಂಡುಬರುತ್ತಿದ್ದಾರೆ. ವಿಶೇಷ ಸಂದರ್ಭಗಳಲ್ಲಿ ಶ್ರೀಮಠಕ್ಕೆ ರಾವೂರು ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಆಗಮಿಸಿ ಶ್ರೀಮಠದ ಕಾರ್ಯಕ್ರಮಗಳಲ್ಲಿಪಾಲ್ಗೊಳ್ಳುತ್ತಾರೆ. ಶ್ರೀ ಮಠದ ವತಿಯಿಂದ ಮಠ ಹಾಗೂ ದೇವಾಲಯದ ಆವರಣದಲ್ಲಿಪ್ರಾಥಮಿಕ ಶಾಲೆಯನ್ನು ನಡೆಸುತ್ತಿದ್ದು ಈ ಭಾಗದ ಗ್ರಾಮೀಣ ಮಕ್ಕಳಿಗೆ ನೆರವನ್ನು ಕಲ್ಪಿಸಿದೆ.
Swamiji
Swamiji Name :
ಶ್ರೀ. ಮ.ನಿ.ಪ್ರ. ಸಿದ್ಧಲಿಂಗ ಸ್ವಾಮಿಗಳು
Date of Birth :
05-06-1946
Place :
ಹೊನಗುಂಟ, ಚಿತ್ತಾಪುರ ತಾ||
Photo :
Programs
ಪ್ರತಿ ಅಮವಾಸÉ, ಹುಣ್ಣಿಮೆಗಳಲ್ಲಿ ರುದ್ರಾಭಿಷೇಕ ಶಿವರಾತ್ರಿಯಂದು ರುದ್ರಾಭಿಷೇಕ ಜಾಗರಣೆ
Institutions
ಕಿರಿಯ / ಹಿರಿಯ ಪ್ರಾಥಮಿಕ ಶಾಲೆ
Photos
Full Address Kannada
ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠ
ಹೊನಗುಂಟಾ - 585 828
ಚಿತ್ತಾಪುರ ತಾ||, ಕಲಬುರಗಿ ಜಿಲ್ಲೆ